Art and Crafts
ಕಲೆ ಮತ್ತು ಕರಕುಶಲ
Poetry
ಕವನ
Literature
ಸಾಹಿತ್ಯ
Travel Journal
ಪ್ರವಾಸ ಪತ್ರಿಕೆ
Theatre and Drama
ರಂಗಭೂಮಿ ಮತ್ತು ನಾಟಕ
Home » Default Category (ಪೂರ್ವ ನಿಯೋಜಿತ ವರ್ಗ), Poetry (ಕವನ) 0

ಸತ್ಯ

Submitted by Nagaraj KV on May 23, 2015 – 7:33 am 2 Comments

True.1

ಕಷ್ಟವೇನಲ್ಲ,

ಹುಡುಕಿದರೆ ಸಿಕ್ಕೀತು
ಬದುಕಲಗತ್ಯದ ಪ್ರೀತಿ!

ಕಠಿಣಾತಿ ಕಷ್ಟ,
ಹುಡುಕಿದರೂ ಸಿಕ್ಕದು
ಎಲ್ಲಿಹುದದು ಸತ್ಯ?

ಅಯ್ಯೋ ಮರುಳೆ,
ಪಂಡಿತೋತ್ತಮರೆಂದರು
ದೇವರೇ ಸತ್ಯ!

ದೇವರು? ಸತ್ಯ?
ಎಲ್ಲಿಹುದದು ಸತ್ಯ?
ಇನ್ನು ದೇವರು?

ಸಿಕ್ಕರೂ ಸತ್ಯ,
ಮುಖವಾಡದಡಗಿಹುದು ಸತ್ಯ,
ಅರ್ಥವಾಗದ ಸತ್ಯ!

ಅರ್ಥೈಸಿದರೆ ಸತ್ಯ,
ಪಥ್ಯವಾದರೆ ಸತ್ಯ,
ದೇವನೊಲಿವ, ಸತ್ಯ!

-ಕವಿನಾಗರಾಜ್.

2 Comments »

Leave a comment