Art and Crafts
ಕಲೆ ಮತ್ತು ಕರಕುಶಲ
Poetry
ಕವನ
Literature
ಸಾಹಿತ್ಯ
Travel Journal
ಪ್ರವಾಸ ಪತ್ರಿಕೆ
Theatre and Drama
ರಂಗಭೂಮಿ ಮತ್ತು ನಾಟಕ
Home » Archive by Author

Articles by Nagaraj KV

ಜಗಳ

March 14, 2016 – 10:21 am | By Nagaraj KV
pict-jagala

 
   ಸಮಯವಿದ್ದುದರಿಂದ ಮೂಢ ತನ್ನ ಗೆಳೆಯ ಮಂಕನನ್ನು ಮಾತನಾಡಿಸಿಕೊಂಡು ಬರಲು ಆತನ ಮನೆಗೆ ಹೋದ. ಆ ಸಮಯದಲ್ಲಿ ಮಂಕ ಮತ್ತು ಅವನ ಪತ್ನಿಯ ನಡುವೆ ಯಾವುದೋ ವಿಷಯಕ್ಕೆ ಬಿರುಸಿನ ವಾಗ್ವಾದ ನಡೆದಿತ್ತು. ಸಂದರ್ಭ ಸರಿಯಿಲ್ಲವೆಂದು ಮೂಢ ಹಿಂತಿರುಗಿ ಹೋಗಬೇಕೆಂದಿದ್ದಾಗ ಅವನನ್ನು ನೋಡಿದ ಗೆಳೆಯ ‘ಏಯ್, ಬಾರೋ’ ಎಂದು …

ಪಿಕಳಾರನ ಸಂಸಾರ

March 2, 2016 – 3:06 am | By Nagaraj KV
spl photos 110

ಹಕ್ಕಿಯೊಂದು ಹಾರಿ ಬಂದು ಕಿಟಕಿಯಲ್ಲಿ ಕುಳಿತಿತು
ಸುತ್ತಮುತ್ತ ಹಾರಿತು ಅತ್ತ ಇತ್ತ ನೋಡಿತು |
ಸರಿಯೆಂದು ಕಂಡಿತು ಗೂಡನೊಂದು ಕಟ್ಟಿತು
ಕಾಲ ಕೂಡಿ ಬಂದಿತು ಮೊಟ್ಟೆ ಮೂರು ಇಟ್ಟಿತು ||
ಹಕ್ಕಿಗಾಗಿ ಕೋಣೆ ತೆರವು ಮನೆಮಂದಿಯಲ್ಲ ನೆರವು
ತಾಯಿಗಿಲ್ಲ ತಲೆಭಾರ ಜೀವಸೆಲೆಗೆ ಉಪಕಾರ |
ಬಿಟ್ಟ ಬಾಣದಂತೆ ಹಾರಿ ಬಂದವರನು ಹೆದರಿಸಿತು
ಕಾವಲಿದ್ದು ಕಾವು ಕೊಟ್ಟು ತಾಯಿತನವ ಮೆರೆಯಿತು||
ಮೊಟ್ಟೆ …

ಅರಿವು

February 27, 2016 – 2:35 pm | By Nagaraj KV

ನಮ್ಮವರೆಂಬರು ನಮ್ಮವರಲ್ಲ; ಮೋಹಕೆ ಸಿಲುಕಿ ಬಳಲಿದೆನಲ್ಲ |
ದೇವ ನಿನ್ನನು ನೆನೆಯಲೆ ಇಲ್ಲ; ಹುಟ್ಟಿನ ಮಹತಿ ತಿಳಿಯಲೆ ಇಲ್ಲ || ಪ ||
ಕಂಡದ್ದೆಲ್ಲ ಬಯಸಿದೆನಲ್ಲ; ಸಿಕ್ಕದೆ ಇರಲು ಶಪಿಸಿದೆನಲ್ಲ |
ಇಲ್ಲದ ಬಯಸಿ ಕೊರಗಿದೆನಲ್ಲ; ಇದ್ದುದ ಬಿಟ್ಟು ಕೆಟ್ಟೆನಲ್ಲ || 1 ||
ಚಪಲತೆ ಕಣ್ಣನು ಮುಚ್ಚಿತಲ್ಲ; ನಿಜ ಕಾಣದಾಯಿತಲ್ಲ |
ಚಂಚಲ ಬುದ್ಧಿ …

ದೇಹದಾನ – ಕೆಲವು ಮಾಹಿತಿಗಳು, ನನ್ನ ಲೇಖನಕ್ಕೆ ಬಂದ ಪ್ರತಿಕ್ರಿಯೆಗಳು

September 19, 2015 – 7:14 am | By Nagaraj KV

ದೇಹದಾನ ಕುರಿತ ನನ್ನ ಲೇಖನಕ್ಕೆಬಂದ ಪ್ರತಿಕ್ರಿಯೆಗಳು ವಿಚಾರಾರ್ಹವಾಗಿರುವುದರಿಂದ ನಿಮ್ಮೊಡನೆ ಹಂಚಿಕೊಳ್ಳುತ್ತಿರುವೆ:
‘ಸಂಪದ’ ತಾಣದಲ್ಲಿ:
ಕವಿನಾಗರಾಜರೆ,
ನೂರಾರು ವರ್ಷ ಆರೋಗ್ಯವಂತರಾಗಿ ಬಾಳಿ ಎಂದು ಮೊದಲಿಗೆ ಹಾರೈಸುವೆ. ನಿಮ್ಮ ಅಂಗಾಂಗ ದಾನ,ದೇಹದಾನದ ನಿರ್ಧಾರಕ್ಕೆ ಜೈ. ಕೊನೆಯಲ್ಲಿ ಹೇಳಿದ ಮಾತು ತುಂಬಾ ಚೆನ್ನಾಗಿದೆ-“…ವಾಸ್ತವತೆ ಅರಿತಲ್ಲಿ, ಬದುಕಿನ ಮಹತ್ವ ತಿಳಿದಲ್ಲಿ ನನ್ನ ಈ ಬಯಕೆ …

ಮೇಲಕ್ಕೇರಿದ ಮೈಲಾರಶರ್ಮ

September 2, 2015 – 6:49 am | By Nagaraj KV
soul

ನಾನು ಹಾಸನದ ಜಿಲ್ಲಾಧಿಕಾರಿಯವರ ಕಛೇರಿಯಲ್ಲಿ ಕೆಲಸ ಮಾಡುತ್ತಿದ್ದಾಗ ನನ್ನ ಸಹೋದ್ಯೋಗಿಯಾಗಿದ್ದವರು ಮೈಲಾರಶರ್ಮ. ನನಗೆ ಸುಮಾರು ೩೫-೩೬ ವರ್ಷಗಳಿಂದ ಪರಿಚಯಸ್ಥರು. ನನಗಿಂತ 8-10 ವರ್ಷ ದೊಡ್ಡವರು. ಎಲ್ಲರೊಂದಿಗೆ ಒಳ್ಳೆಯ ಬಾಂಧವ್ಯ ಹೊಂದಿದ್ದ ಸರಳ ವ್ಯಕ್ತಿ, ಸಂಪ್ರದಾಯಸ್ಥ. ನಿವೃತ್ತರಾದ ಮೇಲೆ ಪೂಜೆ, ಪುನಸ್ಕಾರ, ತೀರ್ಥಕ್ಷೇತ್ರಗಳಿಗೆ ಪ್ರವಾಸ ಮಾಡಿಕೊಂಡಿದ್ದವರು. ಅವರು ದಿನಾಂಕ …

ಸೋಲದಿರು

August 8, 2015 – 4:31 pm | By Nagaraj KV
bless u

ದೂಷಿಸದಿರು ಮನವೆ ಪರರು ಕಾರಣರಲ್ಲ
ನಿನ್ನೆಣಿಕೆ ತಪ್ಪಾಗಿ ಕಂಡಿರುವೆ ನೋವ |
ವಿಧಿಯು ಕಾರಣವಲ್ಲ ಹಣೆಬರಹ ಮೊದಲಲ್ಲ
ಕೊರಗಿದರೆ ಫಲವಿಲ್ಲ ದಣಿಯದಿರು ಮನವೆ ||
ಉಗ್ರವಾಗಿಹ ಮನವೆ ತಾಳು ತಾಳೆಲೆ ನೀನು
ವಿವೇಕ ನಲುಗೀತು ಕೆರಳದಿರು ತಾಳು |
ವ್ಯಗ್ರತೆಯ ನಿಗ್ರಹಿಸಿ ಸಮಚಿತ್ತದಲಿ ನಡೆಯೆ
ಸೋಲಿನ ಅನುಭವವೆ ಗೆಲುವಿಗಾಸರೆಯು ||
ಮೂಢನಂತಾಡದಿರು …

ಭಾವಕಟ್ಟು

July 20, 2015 – 3:31 pm | By Nagaraj KV
3

     ಅಣೆಕಟ್ಟಿನಲ್ಲಿ ನೀರಿದೆ. ಒಳಹರಿವು ಹೆಚ್ಚಾದಂತೆ ನೀರನ್ನು ಕ್ರೆಸ್ಟ್ ಗೇಟ್ ತೆರೆದು ಹೊರಬಿಡಲಾಗುತ್ತದೆ. ನೀರನ್ನು ಹೊರಬಿಡದೆಹೋದರೆ? ಅಣೆಕಟ್ಟು ತುಂಬಿ ಹೆಚ್ಚಾದ ನೀರು ಹೊರಬರುತ್ತದೆ. ನೀರಿನ ದಬ್ಬುವ ಶಕ್ತಿ ಒಳಹರಿವು ಹೆಚ್ಚಾದಂತೆ ಹೆಚ್ಚುತ್ತಾ ಹೋಗಿ ಅಣೆಕಟ್ಟಿಗೆ ಅಪಾಯವಾಗಬಹುದು. ಭೂಕಂಪ, ಪ್ರಕೃತಿ ವಿಕೋಪ, ಮಾನವ ನಿರ್ಮಿತ ಅನಾಹುತ, ಇತ್ಯಾದಿ ಯಾವುದೇ …

ಸಂಪ್ರದಾಯಗಳು ಮತ್ತು ನಾವು

July 14, 2015 – 6:17 am | By Nagaraj KV
chained elephant

ಸುಗಮ ಜೀವನಕೆ ಕಟ್ಟುಪಾಡುಗಳು ಬೇಕು
ಮೀರಿದರೆ ಆಪತ್ತು ನೆಮ್ಮದಿಯು ಹಾಳು |
ಶಾಸ್ತ್ರವಿಧಿಗಳು ಬೇಕು ಮಂಗಳವ ತರಲು
ವಿವೇಕದಿಂದನುಸರಿಸೆ ಸುಖವು ಮೂಢ ||
     ಒಂದು ಕಾಲವಿತ್ತು, ಕೈ ಹಿಡಿದ ಗಂಡ ಗತಿಸಿದರೆ ವಿಧವೆ ಪತ್ನಿ ಕೇಶ ಮುಂಡನ ಮಾಡಿಸಿಕೊಂಡು, ಕೆಂಪು ಅಥವಾ ಬಿಳಿ ಸೀರೆ ಉಟ್ಟುಕೊಂಡು, ಕೈಗೆ …

ಪ್ರೀತಿಯ ಅಂತ್ಯ

July 8, 2015 – 6:18 am | By Nagaraj KV
love6[1]

 
   ಒಂದು ಸುಂದರವಾದ ದ್ವೀಪವಿತ್ತು. ಅಲ್ಲಿ ಎಲ್ಲಾ ಭಾವನೆಗಳೂ ಸಾಮರಸ್ಯದಿಂದ ಬಾಳುತ್ತಿದ್ದವು. ಒಂದು ದಿನ ದೊಡ್ಡ ಪ್ರವಾಹ ಬಂದು ದ್ವೀಪ ಮುಳುಗುವ ಸ್ಥಿತಿ ಉಂಟಾಯಿತು. ಎಲ್ಲಾ ಭಾವನೆಗಳೂ ಜೀವಭಯದಿಂದ ತತ್ತರಿಸಿದವು. ಜೀವ ಉಳಿಸಿಕೊಳ್ಳಲು ಪರದಾಡಿದವು. ಆಗ ಪ್ರೀತಿ ಒಂದು ದೋಣಿಯನ್ನು ಸಿದ್ಧಪಡಿಸಿತು. ಎಲ್ಲಾ ಭಾವನೆಗಳೂ ಜೀವ ಉಳಿದರೆ …

ಪ್ರಖರ ಸತ್ಯವಾದಿ ಪಂ. ಸುಧಾಕರ ಚತುರ್ವೇದಿಯವರಿಗೆ 119 ವರ್ಷಗಳು – ಮಹಾನ್ ವ್ಯಕ್ತಿಯ ಮಾರ್ಗದರ್ಶನ ಸದಾ ನಮಗಿರಲಿ!

June 28, 2015 – 3:20 am | By Nagaraj KV
DSC00030

 
   ಮರ್ಯಾದಾ ಪುರುಷೋತ್ತಮ ಶ್ರೀರಾಮನ ಜನ್ಮದಿನದಂದೇ ಪ್ರಖರ ಸತ್ಯವಾದಿ, ನಂಬಿದ ಧ್ಯೇಯಕ್ಕಾಗಿ ಟೀಕೆ, ಟಿಪ್ಪಣಿಗಳಿಗೆ ಅಂಜದೆ ಹಿಡಿದ ಹಾದಿಯಲ್ಲಿಯೇ ಅಳುಕದೆ ಮುಂದುವರೆದು, ಸತ್ಯಪ್ರಸಾರ ಮಾಡುತ್ತಿರುವ ಕರ್ಮಯೋಗಿ, ಶತಾಯು ಪಂಡಿತ ಸುಧಾಕರ ಚತುರ್ವೇದಿಯವರ ಜನ್ಮದಿನವೂ ಆಗಿರುವುದು ವಿಶೇಷವೇ ಸರಿ. ಈ ರಾಮನವಮಿಗೆ (28.3.2015) 118ವಸಂತಗಳನ್ನು ಕಂಡು 119ನೆಯ ವರ್ಷಕ್ಕೆ …